ಶ್ರೀ ಶಾರದಾ ಪೀಠಂ ಶೃಂಗೇರಿ ವತಿಯಿಂದ ಬಡಾಕೆರೆ ಶಾಲೆಗೆ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಸೇವೆ

0
7

ಶ್ರೀ ಶಾರದಾ ಪೀಠಂ ಶೃಂಗೇರಿ ವತಿಯಿಂದ ,ಗ್ರಾಮೀಣ ಭಾಗದ ಮಕ್ಕಳಿಗೆ ಸುರಕ್ಷಿತ ಮತ್ತು ಸುಲಭ ಸಾರಿಗೆಯನ್ನು ಒದಗಿಸುವ ಮೂಲಕ ಶಾಲಾ ದಾಖಲಾತಿಯನ್ನು ಹೆಚ್ಚಿಸಲು ಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ವರ್ಧಂತಿಯ ಸಂದರ್ಭದಲ್ಲಿ ಶ್ರೀ ಶಾರದಾ ಪ್ರಸಾದ ರೂಪದಲ್ಲಿ ಬಸ್ ಅನ್ನು ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು ಅನುಗ್ರಹಿಸಿದರು.

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ವೇ.ಮೂ.ಲೋಕೇಶ ಆಡಿಗ ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ ಮತ್ತು ನಾಗ ಪಾತ್ರಿಗಳು ಬಡಾಕರೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರಿಗೆ ಬಸ್ ಕೀಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆ ಆ‌ರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್ ಟಿ ಮಂಜು, ಅನುರಾಧ ಗುರುರಾಜ್ ಶೆಟ್ಟಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ಎಂ ನಾಯಕ್ ಶಿಕ್ಷಣ ಸಂಯೋಜಕರಾದ ಸತ್ಯನಾರಾಯಣ ಕೊಡೆರಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಧರ ದೇವಾಡಿಗ ಮತ್ತು ಮುಖ್ಯ ಶಿಕ್ಷಕಿ ರಶ್ಮಿ ಪಿ ಸಿ ಮತ್ತು ಶಾಲಾ ಎಲ್ಲಾ ಶಿಕ್ಷಕಿಯರು– ಹಾಗೂ ಎಸ್ ಡಿ ಎಂ ಸಿ ಸದಸ್ಯರು ಜೆಪಿ ಬಡಾಕೆರೆ ಮತ್ತು ನಾಗರಾಜ್ ಮಯ್ಯ ಗುಜ್ಜಾಡಿ ಅರುಣ್ ಹಕ್ಲಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here