ಬಂಟ್ವಾಳ : ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ

0
143

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ನೆಡದಿದೆ.

ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು.

ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆಯ ಅಂಚಿಗೆ ತಲುಪುತ್ತಿದ್ದಂತೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಕಾರು ಇವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಭಾರತಿ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here