ಮಗನ ರೋಗ ಗುಣಪಡಿಸಲು , ಮಾಟಗಾತಿಯ ಮಾತು ನಂಬಿ ಮಗಳನ್ನೇ ಬಲಿಕೊಟ್ಟ ಕ್ರೂರಿ ತಾಯಿ..!

0
77

ಜಾರ್ಖಂಡ್: ಮಾಟಗಾತಿಯ ಮಾತು ಕೇಳಿ ಮಹಿಳೆಯೊಬ್ಬಳು ಮಗನ ರೋಗ ಗುಣಪಡಿಸಲು ಮಗಳನ್ನೇ ಬಲಿಕೊಟ್ಟಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಬಾಲಕಿಯ ತಾಯಿ ಆಕೆಯ ಪ್ರಿಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮ ನವಮಿ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಮಾಧ್ಯಮಿಕ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಸಂತ್ರಸ್ತೆಯ ತಾಯಿ ಸಲ್ಲಿಸಿದ ಲಿಖಿತ ದೂರಿನ ಆಧಾರದ ಮೇಲೆ, ಆರಂಭದಲ್ಲಿ ಧನೇಶ್ವರ ಪಾಸ್ವಾನ್ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಆದಾಗ್ಯೂ ತನಿಖೆ ಶೀಘ್ರದಲ್ಲೇ ಬೇರೆಯದೇ ತಿರುವು ಪಡೆದುಕೊಂಡಿತು.

ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರು ಮತ್ತು ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅವರ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಯಿತು. ತನಿಖೆಯ ಸಮಯದಲ್ಲಿ ಆಘಾತಕಾರಿ ವಿಚಾರಗಳು ಬಹಿರಂಗಗೊಂಡಿದ್ದು, ಬಾಲಕಿ ಸಾವಿಗೆ ಆಕೆಯ ತಾಯಿಯೇ ಮೂಲ ಕಾರಣ ಎಂಬುದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here