ಚಿಕ್ಕಮಗಳೂರು : ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ; ಮನನೊಂದು ಯುವಕ ಆತ್ಮಹತ್ಯೆ.!

0
114

ಕಳೆದ ಕೆಲವು ವರ್ಷಗಳಿಂದ ಮದುವೆಗೆ ಸೂಕ್ತ ಹೆಣ್ಣು ಸಿಗುತ್ತಿಲ್ಲ ಎಂಬ ಹತಾಶೆಯಿಂದ ಮನನೊಂದ 26 ವರ್ಷದ ಕುರಿಗಾಹಿ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದ ಕುಮಾರ್ (26) ಎಂದು ಗುರುತಿಸಲಾಗಿದೆ. ಕುಮಾರ್ ಮೂಲತಃ ಕುರಿಗಾಹಿ ವೃತ್ತಿ ಮಾಡುತ್ತಿ ದ್ದು, ಕಳೆದ ಕೆಲವು ವರ್ಷಗಳಿಂದ ಈತನ ಕುಟುಂಬಸ್ಥರು ಮದುವೆಗೆ ಹೆಣ್ಣು ಹುಡುಕುತ್ತಿದ್ದರೂ, ಸೂಕ್ತ ಸಂಬಂಧ ಕೂಡಿಬಂದಿರಲಿಲ್ಲ. ಇದರಿಂದಾಗಿ ತೀವ್ರ ಹತಾಶೆಗೆ ಒಳಗಾಗಿದ್ದ ಕುಮಾರ್, ಹೆಣ್ಣು ಸಿಗದಿದ್ದಕ್ಕೆ ಮನನೊಂದಿದ್ದನು.

ಮೃತನು ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದವನು ಎಂದು ಗುರುತಿಸಲಾಗಿದೆ. ಕುರಿ ಮೇಯಿಸಲು ಹೋಗಿದ್ದ ಈತ ಕುಡಿದ ಮತ್ತಿನಲ್ಲಿ ಹತಾಶೆಯಿಂದ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here