ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

0
25

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ತನ್ನ ತಂಗಿ ಮದುವೆಯಾಗಿದ್ದ 40 ವರ್ಷದ ವರನ ತಾಯಿಗೆ ಅಣ್ಣನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.

ತನ್ನ 20 ವರ್ಷದ ತಂಗಿಯನ್ನು 40 ವರ್ಷದ ವ್ಯಕ್ತಿಯೊಬ್ಬ ಪ್ರೀತಿಸಿ ವಿವಾಹ ಆಗಿದ್ದಕ್ಕೆ ಕೋಪಗೊಂಡ ಯುವತಿಯ ಅಣ್ಣ, ತನ್ನ ಸ್ನೇಹಿತರ ಜತೆ ಸೇರಿ ವಿವಾಹವಾದ ವ್ಯಕ್ತಿಯ ತಾಯಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲಕ್ಷ್ಮೀದೇವಮ್ಮ ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ನೇಹಿತರ ಜತೆ ಮಾ.20 ರಂದು ಪುರುಷೋತ್ತಮ್ ಅವರ ತಾಯಿಯ ಮನೆ ಮೇಲೆ ದಾಳಿ ನಡೆಸಿ ಕೃತ್ಯ ಎಸಗಿದ್ದ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಮೃತಟಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here