ಕೊಯಿಲ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೆನರಾ ರೆಬೆಕೊ ಸಂಸ್ಥೆಯಿಂದ ಬೈಸಿಕಲ್ ವಿತರಣೆ

0
8

ಸರ್ಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೆಬೆಕೊ ಸಂಸ್ಥೆಯ ವತಿಯಿಂದ ಬೈಸಿಕಲ್ ವಿತರಣೆ ಮಾಡಲಾಯಿತು. 50 ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಮಾಡಲಾಯಿತು.

ಕೆನರಾ ರೆಬೆಕೊ ಸಂಸ್ಥೆಯ ಉಪಾಧ್ಯಕ್ಷರಾದ ಮುರಳೀಧರ ಶೆಣೈ ಹಾಗೂ ಉದ್ಯೋಗಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ರಾಜೇಶ್ ಅಂಚನ್ ಇವರು ಈ ಕಾರ್ಯಕ್ರಮ ನೆರವೇರಿಸಿದರು.

ಕಳೆದ 6 ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ನಿರಂತರವಾಗಿ ಈ ಸಂಸ್ಥೆಯು ಬೈಸಿಕಲ್ ವಿತರಣೆ ಮಾಡುತ್ತಿದೆ. ಸಮಾರಂಭದಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಲ್ಯಾನ್ಸಿ ಕುವೆಲ್ಲೊ, ನಿವೃತ್ತ ಶಿಕ್ಷಕರಾದ ರಮೇಶ್ ಮಯ್ಯ, ಮುಖ್ಯ ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕಿ ಸೌಮ್ಯ ಸ್ವಾಗತಿಸಿದರು.ಶಿಕ್ಷಕರಾದ ಪ್ರವೀಣ್ ಕಾಮತ್ ನಿರೂಪಿಸಿ, ವಂದಿಸಿದರು.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here