ಬೀದರ್ : ರಸ್ತೆ ದಾಟುವಾಗ ಒಮಿನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮಾಂಗರ್ ವಾಡಿ ಗಲ್ಲಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ರುದ್ರಾ (7ವರ್ಷ) ಎಂದು ಗುರುತಿಸಲಾದ್ದು, ಅಂಗಡಿಗೆ ಹೋಗಿ ಮನೆಗೆ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ವ್ಯಾನ್ ಚಾಲಕ ನಗರದ ಹೋಟೆಲ್ ವೊಂದರದಲ್ಲಿ ಕೆಲಸ ಮಾಡುತ್ತಿದ್ದ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಬಾಲಕನ ಸಂಬಂಧಿಕರು ಹೋಟೆಲ್ ಎದುರು ನೂರಾರು ಜನರು ಜಮಾಯಿಸಿದರು.
ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆ ಕುರಿತು ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

