ಬೆಂಗಳೂರು : ಫ್ಲೈವುಡ್ ಗೆ ಬೆಂಕಿ ಹೊತ್ತಿಕೊಂಡು, 6 ಹಸುಗಳು ಸಜೀವ ದಹನ..!

0
11

ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಶೆಡ್ ನಲ್ಲಿ ಇದ್ದಂತಹ 6 ಹಸುಗಳು ಸಜೀವವಾಗಿ ದಹನಗೊಂಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯ ಶಾಂಪುರ ರಸ್ತೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ಫ್ಲೈವುಡ್ ಅಂಗಡಿಗೆ ಹೊತ್ತಿಕೊಂಡಿದ್ದ ಬೆಂಕಿಯ ತೀವ್ರತೆ ಹೆಚ್ಚಾಗಿ ಹಸುಗಳ ಶೆಡ್​ಗೂ ವ್ಯಾಪಿಸಿದೆ. ಈ ಶೆಡ್​ನಲ್ಲಿ ಒಟ್ಟು 20 ಹಸುಗಳಿದ್ದವು ಎನ್ನಲಾಗ್ತಿದೆ. ಇದರಲ್ಲಿ 6 ಹಸುಗಳು ಸಾವನ್ನಪ್ಪಿದ್ದು, 3 ಹಸುಗಳು ಸುಟ್ಟ ಗಾಯಗಳಿಂದ ನರಳುತ್ತಿವೆ.

ತಕ್ಷಣ ಸ್ಥಳೀಯರು ಸ್ಥಳಕ್ಕೆ ದಾವಿಸಿದ್ದು, 14 ಹಸುಗಳನ್ನ ರಕ್ಷಣೆ ಮಾಡಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಬಂದ ನಾಲ್ಕು ಅಗ್ನಿ ಶಾಮಕ ವಾಹಗಳು ಬೆಂಕಿ ನಂದಿಸುವ ಕಾರ್ಯ ನಡೆಸಿ ಯಶಸ್ವಿಯಾಗಿದೆ.

ಇದೇ ವೇಳೆ ಡಿಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಗೊಂಡಿರುವ ಹಸುಗಳಿಗೆ ಪಶು ವೈದ್ಯರು ಬಂದು ಚಿಕಿತ್ಸೆ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here