ಚಿಕ್ಕಮಗಳೂರು : ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ಕೇರಳ ಮೂಲದ ಯುವತಿ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು.
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿ. ಕೇರಳದಿಂದ ಬಂದಿದ್ದ 40 ಜನರ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಯುವತಿಯ ನಾಪತ್ತೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

