ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಕ್ಕೆ ಪ್ರಥಮ ದ್ವಿತೀಯ ಸ್ಥಾನಿಯಾದ ಉಡುಪಿ ದಕ್ಷಿಣಕನ್ನಡ ಜಿಲ್ಲೆ : ಉದಯ ಶೆಟ್ಟಿ ಮುನಿಯಾಲು ಅವರಿಂದ ಅಭಿನಂದನೆ

0
25

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯು ದ್ವಿತೀಯ ಸ್ಥಾನಿಯಾಗಿದೆ. ಈ ಸಾಧನೆಗೆ ಉಭಯ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಪರಿಶ್ರಮವೇ ಮುಖ್ಯ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಉದಯ ಶೆಟ್ಟಿ ಮುನಿಯಾಲು ಅವರು ಸಲ್ಲಿಸಿದ್ದಾರೆ. ಈ ಸಾಧನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಸಾಧನೆಗಳಿಗೆ ಪ್ರೇರಣೆಯಾಗಲಿ ಎಂದು ಅವರು ಆಶಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯು ಸದಾ ಮುಂಚೂಣಿಯಲ್ಲಿದ್ದು, ಈ ಫಲಿತಾಂಶವು ಉಭಯ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಶ್ರಮ, ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದಿಂದ ಇಂತಹ ಯಶಸ್ಸು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಭವಿಷ್ಯದಲ್ಲಿಯೂ ಇದೇ ರೀತಿಯ ಸಾಧನೆಗಳು ಮುಂದುವರೆಯಲಿ ಎಂದು ಹಾರೈಸುತ್ತಾ, ಎಲ್ಲಾ ವಿದ್ಯಾರ್ಥಿಗಳಿಗೆ ಉದಯ ಶೆಟ್ಟಿ ಮುನಿಯಾಲು ಅವರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here