ಸಜೀಪ ಮೂಡ ಗ್ರಾಮದ ಪಣೋಲಿ ಬೈಲು ನಿವಾಸಿಯಾದ ಸುಷ್ಮಾ ಸದಾಶಿವ ಕುಲಾಲ್ ಅವರ ಪುತ್ರ ಅದೀಸ್ ಕುಲಾಲ್ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, 600ರಲ್ಲಿ 550 ಅಂಕಗಳನ್ನು ಪಡೆದು ಗಮನ ಸೆಳೆದಿದ್ದಾರೆ.

ಅವರ ಈ ಸಾಧನೆಗೆ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ. ಪರಿಶ್ರಮ ಮತ್ತು ನಿಯಮಿತ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.
ಅದೀಸ್ ಕುಲಾಲ್ ಅವರ ಸಾಧನೆ ಗ್ರಾಮಕ್ಕೆ ಹೆಮ್ಮೆ ತಂದಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಕೆಗಳು ಹರಿದುಬರುತ್ತಿವೆ.

