ಹೆಬ್ರಿ : ಟೆಂಪೋ ಢಿಕ್ಕಿ – ವಿದ್ಯಾರ್ಥಿನಿ ಮೃತ್ಯು

0
157

ಹೆಬ್ರಿ : ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಬಸ್ ಇಳಿದು ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಯೊಬ್ಬಳು ಮೃತಪಟ್ಟ ಘಟನೆ ಹೆಬ್ರಿ ಎಸ್.ಆರ್. ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಸಂಭವಿಸಿದೆ.

ಮೃತರನ್ನು ಎಸ್‌ಆರ್ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಎಂದು ಗುರುತಿಸ ಲಾಗಿದೆ. ಇನ್ನೋರ್ವ ವಿದ್ಯಾರ್ಥಿನಿ ಮೃತರ ಸಂಬಂಧಿ ಅರ್ಪಣಾ ಗಾಯ ಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಉಡುಪಿ ಕಡೆಯಿಂದ ಬಸ್‌ನಲ್ಲಿ ಬಂದು ಹೆಬ್ರಿ ಕಡೆಗೆ ಹೋಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದಕ್ಕಾಗಿ ಇಳಿದಿದ್ದು, ಈ ವೇಳೆ ರಸ್ತೆ ದಾಟುತ್ತಿದ್ದ ಇವರಿಗೆ ಉಡುಪಿ ಕಡೆಯಿಂದ ರಾಂಗ್ ಸೈಡ್‌ನಿಂದ ಬಂದ ಮಿನಿ ಗೂಡ್ಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಅಪರ್ಣ ಮತ್ತು ಪ್ರೀತಿ ತೀವ್ರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಇವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಪ್ರೀತಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here