ಹಾವೇರಿ : ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಸಮೀಪ ಅಡಿಕೆ ವ್ಯಾಪಾರಿಯೊಬ್ಬರಿಗೆ ಸೇರಿದ ಕಾರಿನ ಗಾಜು ಒಡೆದು 30 ಲಕ್ಷ ರೂ. ದರೋಡೆ ಮಾಡಲಾಗಿದೆ. ರಾತ್ರಿ ಘಟನೆ ಸಂಭವಿಸಿದೆ.
ಶಿರಸಿಯ ಅಡಿಕೆ ವ್ಯಾಪಾರಿ ಅಬ್ದುಲ್ ರಹೀಮ್ ಬ್ಯಾಡಗಿಗೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು.
ರಾತ್ರಿ 8.30 ರ ವೇಳೆಗೆ ಹಾವಣಗಿ ಕ್ರಾಸ್ ಸಮೀಪ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದಾಗ ಇಬ್ಬರು ವ್ಯಕ್ತಿಗಳು ಕಾರಿನ ಗಾಜನ್ನು ರಾಡ್ ನಿಂದ ಒಡೆಯುತ್ತಿರುವುದು ಕಂಡುಬಂದಿದೆ. ಅವರನ್ನು ತಡೆಯಲು ಹೋದ ಅಬ್ದುಲ್ ರಹಿಮ್ ಮೇಲೆ ಹಲ್ಲೆ ನಡೆಸಿದ ದರೋಡೆಕೋರರು ಕಾರಿನೊಳಗೆ ಪ್ಲಾಸ್ಟಿಕ್ ಚೀಲದಲ್ಲಿದ್ದ 30 ಲಕ್ಷ ರೂ. ದೋಚಿ ತಮ್ಮ ಕಾರಿನಲ್ಲಿ ಪರಾರಿಯಾಗಿದ್ದಾರೆ. ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿದೆ.

