ಶಿವಮೊಗ್ಗ : ರಸ್ತೆ ಮಧ್ಯೆ ಬಸ್ ಉರುಳಿ, ಹಲವರಿಗೆ ಗಾಯ

0
75

ಶಿವಮೊಗ್ಗ : ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ಸಂಭವಿಸಿದೆ.

ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

LEAVE A REPLY

Please enter your comment!
Please enter your name here