ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ ( ಮಕ್ಕಳ ಸಂತೆ )

0
9

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು ಖರೀದಿಸಿ ಮಕ್ಕಳ ವ್ಯಾಪಾರಕ್ಕೆ ಪ್ರೋತ್ಸಾಹಿಸಿದರು.

ಗೋಪಾಲಗೌಡ ಕೆ ನಿವೃತ್ತ ಸಹ ಶಿಕ್ಷಕರು ಶೇರಾ, ಗಂಗಾಧರ್ ಶೇರಾ ಮಾಲಕರು ನೂತನ್ ಬೀಡಿಗಳು ಮತ್ತು ಕ್ಯಾಶ್ಯೂ ಇಂಡಸ್ಟ್ರೀಸ್, ಕಡೇಶಿವಾಲಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸುರೇಶ್ ಬನಾರಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಅಭಿಜ್ಞಾ ವಂದಿಸಿದರು. ಸಹಶಿಕ್ಷಕಿ ಜೋಸ್ನಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಸುರಕ್ಷಾ, ಸುಮಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here