ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

0
15

ಉಡುಪಿ : ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್  ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ  ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬಿರುಕುಗಳು ಕಂಡುಬಂದಿದ್ದು, ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ನ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿದ್ದಾರೆ.

LEAVE A REPLY

Please enter your comment!
Please enter your name here