ಬಂಟ್ವಾಳ : ‘ರೋಟರಿ ಬಸ್ ತಂಗುದಾಣ’ ಲೋಕಾರ್ಪಣೆ

0
5

ಲೊರೆಟ್ಟೋ ಹಿಲ್ಸ್ : ನಾಳೆ ಜಿಲ್ಲಾ ಗವರ್ನರ್ ಭೇಟಿ

ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಲೊರೆಟ್ಟೋ ಸಮೀಪದ ಬಾರೆಕಾಡು ಮುಖ್ಯರಸ್ತೆ ಬದಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರೂ 1.30ಲಕ್ಷ ವೆಚ್ಚದಲ್ಲಿ ನಿಮಾಣಗೊಂಡ ‘ರೋಟರಿ ಬಸ್ ತಂಗುದಾಣ’ ಉದ್ಘಾಟನೆಗೆ ಸಿದ್ಧಗೊಂಡಿದೆ.

ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಬಾರೆಕಾಡು ಕ್ರಾಸ್ ಎಂಬಲ್ಲಿ ರೂ 1.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ‘ರೋಟರಿ ಬಸ್ ತಂಗುದಾಣ’ವನ್ನು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಇವರು ಏ.15ರಂದು ಸಂಜೆ ಗಂಟೆ 4.30ಕ್ಕೆ ಲೋಕಾರ್ಪಣೆಗೊಳಿಸುವರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಮತ್ತಿತರ ಗಣ್ಯರು ಭಾಗವಹಿಸುವರು.ಇದೇ ವೇಳೆ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ 3 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಂಗಮಂದಿರ ಕಾಮಗಾರಿ ವೀಕ್ಷಣೆ ಜೊತೆಗೆ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಶುದ್ಧೀಕರಣ ಘಟಕ ಮತ್ತು ಅಂಗನವಾಡಿ ಕೇಂದ್ರಕ್ಕೆ ಕಪಾಟು ಹಸ್ತಾಂತರಗೊಳಿಸುವರು.

ಅಂದು ಸಂಜೆ 6 ಗಂಟೆಗೆ ಲೊರೆಟ್ಟೋ ಹಿಲ್ಸ್ ರೋಟರಿ ಸಭಾಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ್, ಸಹಾಯಕ ಗವರ್ನರ್ ಉಮೇಶ್ ರಾವ್ ಮಿಜಾರ್, ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಮತ್ತಿತರ ಗಣ್ಯರು ಭಾಗವಹಿಸುವರು. ಈ ಸಂದರ್ಭದಲ್ಲಿ ಅನಾರೋಗ್ಯ ಪೀಡಿತರಿಗೆ ವೀಲ್ ಚೇರ್ ವಿತರಣೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here