ಬಂಟ್ವಾಳ : ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ನಿವಾಸಿ, ಪ್ರಗತಿಪರ ಕೃಷಿಕ ಕೆ.ರವೀಂದ್ರ ರೈ (86) ಇವರು ಅಸೌಖ್ಯದಿಂದ ಗುರುವಾರ ತಡರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಮತ್ತು ನಾಲ್ವರು ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರರಾಗಿ, ರಾಯಿ-ಕೊಯಿಲ ವಲಯ ಬಿಜೆಪಿ ಮಾಜಿ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಸ್ವಗೃಹ ಬಳಿ ನೆರವೇರಿತು.

