ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ದುರ್ಗಾನಗರ ಅಜ್ಜಿನಡ್ಕ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇವರ ಸಹಯೋಗದೊಂದಿಗೆ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಹಾಗೂ ಭಜನಾ ತರಬೇತಿ ಕಾರ್ಯಕ್ರಮವನ್ನು ಹಿರಿಯ ಭಜಕರಾದ ಶ್ರೀ ವಾಸುದೇವ ಆಚಾರ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಸಭೆಯ ಅಧ್ಯಕ್ಷತೆಯನ್ನು ಮಂದಿರದ ಅಧ್ಯಕ್ಷರಾದ ಶ್ರೀ ಐತಪ್ಪ ರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಸುರೇಶ್ ಗೌಡ, ಶ್ರೀ ಧನಂಜಯ, ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಿಭಿರದಲ್ಲಿ 60 ಮಂದಿ ಮಕ್ಕಳು ಭಾಗವಹಿಸಿದರು.
ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ರವರು ಶಿಬಿರದ ಕಾರ್ಯಕ್ರಮಗಳ ವ್ಯವಸ್ಥಾಪಕರಾಗಿದ್ದರು.ಕರುಣಾಕರ ರವರು ಪ್ರಾಸ್ತಾವಿಕ ಮಾತನಾಡಿದರು.ಶ್ರೀಮತಿ ಕಾವ್ಯ ಸ್ವಾಗತಿಸಿದರು,ಕೌಶಿಕ್ ಧನ್ಯವಾದವಿತ್ತರು.ಆನಂದ ಕಾರ್ಯಕ್ರಮ ನಿರೂಪಿಸಿದರು.

