ಮಂಗಳೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ಪ್ರಿನ್ಸಿಲ್ಲಾ ಕಾರ್ಡೋಜಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಮಂಡಳಿಯಿಂದ ಗೌರವ ಸನ್ಮಾನ ನೀಡಲಾಯಿತು.
ವಿದ್ಯಾರ್ಥಿನಿಯ ಶ್ರೇಷ್ಠ ಸಾಧನೆಯನ್ನು ಕೊಂಡಾಡಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನಕ್ಕೆ ಶುಭ ಹಾರೈಸಿದರು.
ಪ್ರಿನ್ಸಿಲ್ಲಾ ಕಾರ್ಡೋಜಾ ಅವರ ಸಾಧನೆ ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

