ಹೆತ್ತ ಮಗುವಿನ ಕತ್ತು ಕೊಯ್ದು ಟಾಯ್ಲೆಟ್ʼಗೆ ಎಸೆದ ಪಾಪಿ ತಾಯಿ.!

0
124


ಪಾಪಿ ತಾಯಿಯೊಬ್ಬಳು ಹುಟ್ಟಿದ ಮಗುವನ್ನೇ ಕೊಂದ ಧಾರುಣ ಘಟನೆ ಬೆಳಕಿಗೆ ಬಂದಿದೆ. ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಸಮೀಪದಲ್ಲಿರುವ ಫಾಕ್ಸ್‌ಕಾನ್ ಕಂಪೆನಿಯಲ್ಲಿ ನಡೆದಿದೆ.
ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶೌಚಾಲಯಕ್ಕೆ ತೆರಳಿದ ವೇಳೆ ಅಕಸ್ಮಾತ್ ಹೆರಿಗೆ ಸಂಭವಿಸಿದೆ. ಮದುವೆಯಾಗದಿರುವ ಕಾರಣ ಭಯಗೊಂಡು, ಆಕೆ ನವಜಾತ ಶಿಶುವಿನ ಜೀವ ತೆಗೆದಿದ್ದಾಳೆ.

ನಂತರ ಬೇರೊಬ್ಬರು ಶೌಚಾಲಯಕ್ಕೆ ತೆರಳಿದಾಗ ಘಟನೆ ಪತ್ತೆಯಾಗಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯಲ್ಲಿ ಶಿಶುವಿನ ಹತ್ಯೆ ಮಾಡಿರುವುದು ರೇಣುಕಾ ಎಂಬ ಮಹಿಳೆ ಎಂಬುದು ಬೆಳಕಿಗೆ ಬಂದಿದೆ.

ಆಕೆ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದಳು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಆರೋಪಿಯ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಕೊಲೆ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here