ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ

0
19

ಬೆಳ್ತಂಗಡಿ: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಉಜಿರೆಯಲ್ಲಿ ನಡೆದಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ ಸೇವಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಭರತ್ ಮನೆಯ ಹೊರಗಡೆ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ದಾಳಿಯಿಂದಾಗಿ ನಾರಾಯಣ ಅವರ ಕುತ್ತಿಗೆ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ.

ಘಟನೆಯನ್ನು ಗಮನಿಸಿದ ನೆರೆಹೊರೆಯವರು ತಕ್ಷಣ ನಾರಾಯಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here