ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ.ರಾಮಕೃಷ್ಣ ಶಿರೂರು ಅವರನ್ನು ವಿಶ್ವಕವಿ ರವೀಂದ್ರನಾಥ ಟಾಗೋರ್_ 2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು 2026 ಮೇ 3 ರಂದು ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಅಕ್ಷರ ದೀಪ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.
ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರಿಂದ ಇನ್ನಷ್ಟು ಶಿಕ್ಷಣ,ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದು ಕರ್ನಾಟಕ ರಾಜ್ಯ ಅಕ್ಷರ ದೀಪ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕನ್ಯಾಳ ಮತ್ತು ಪ್ರಧಾನ ಕಾರ್ಯದರ್ಶಿ ದಾಂಡೇಲಿ ಗಣಪತಿ ಹೆಗಡೆ ಅವರು
ಡಾ. ಶಿರೂರು ಅವರಿಗೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.

