ಭೀಕರ ಸರಣಿ ಅಪಘಾತ : 11 ಮಂದಿ ದುರ್ಮರಣ

0
73

ಉತ್ತರಪ್ರದೇಶದ ಮಿರ್ಜಾಪುರ ಸಮೀಪ ರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿದ ಲಾರಿಯೊಂದು ಬೊಲೆರೊ ಜೀಪ್, ಸ್ವಿಫ್ಟ್ ಕಾರು ಹಾಗೂ ಟ್ರೈಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡು ವಾಹನಗಳಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ಪಾರಾಗಲು ಸಾಧ್ಯವಾಗಲಿಲ್ಲ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬೊಲೆರೊ ವಾಹನದಲ್ಲಿದ್ದ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ವಿಫ್ಟ್ ಕಾರಿನ ಚಾಲಕ ಕೂಡ ಮೃತಪಟ್ಟಿದ್ದು, ಲಾರಿಯ ಚಾಲಕ ಅಪಘಾತದ ಹೊಡೆತದಿಂದ ಪ್ರಾಣ ಕಳೆದುಕೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಕಾರಣ ಕುರಿತು ತನಿಖೆ ಮುಂದುವರಿದಿದ್ದು, ಅತಿವೇಗ ಮತ್ತು ನಿಯಂತ್ರಣ ತಪ್ಪಿದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here