
ಶ್ರೀವಾಣಿ ಪ್ರೌಢಶಾಲೆ, ರಜತಾದ್ರಿ ನಡೂರು 2026 ಮಾರ್ಚ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ.
19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
