ಮುಲ್ಕಿ : ಸ್ಕೂಟರ್ ಡಿಕ್ಕಿ ಪಾದಾಚಾರಿ ಮೃತ

0
88

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಸ್ಕೂಟರ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರ ನಿವಾಸಿ ಶಿವಾಜಿ ಕೌಡಿಬ ಭರತ್ ಎಂದು ಗುರುತಿಸಲಾಗಿದೆ.

ಮೃತ ಶಿವಾಜಿ ಮತ್ತಿತರರು ಮಹಾರಾಷ್ಟ್ರದ ಪಂಡರಾಪುರದಿಂದ ಕರಾವಳಿ ಭಾಗಕ್ಕೆ ತೀರ್ಥಯಾತ್ರೆಗೆಂದು ಬಸ್ಸಿನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ಕಾರ್ನಾಡ್ ಬೈಪಾಸ್ ಬಳಿ ವಿಶ್ರಾಂತಿಗೆಂದು ಬಸ್ ಚಾಲಕ ನಿಲ್ಲಿಸಿದ್ದನು.

ಈ ಸಂದರ್ಭ ಶಿವಾಜಿ ರವರು ಬಸ್ಸಿನಿಂದ ಇಳಿದು ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಶಿವಾಜಿ ರವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಹಳೆಯಂಗಡಿಯ ಸಾಮಾಜಿಕ ಕಾರ್ಯಕರ್ತರಾದ ಜಯಕೃಷ್ಣ ಕೋಟ್ಯಾನ್ ತಮ್ಮ ಆಂಬುಲೆನ್ಸ್ ನಲ್ಲಿ ಮುಕ್ಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶಿವಾಜಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here