ಕಡಂದಲೆ ವಿದ್ಯಾಗಿರಿಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಿಡಿಯಿಂದ ಕಾಡ್ಗಿಚ್ಚು

0
92

ಮೂಡುಬಿದಿರೆ : ಕಡಂದಲೆ ವಿದ್ಯಾಗಿರಿಯ ಶಾಲೆಯ ಸಮೀಪವಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಲ್ಲಿ ಭಾನುವಾರ ಕಾಣಿಸಿಕೊಂಡ ಬೆಂಕಿ ಕಿಡಿಯಿಂದಾಗಿ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಕಿ ಹಬ್ಬಿದೆ.

ಶನಿವಾರ ಮಧ್ಯಾಹ್ನ ಪಾಲಡ್ಕ ಬಿ.ಟಿ. ರಸ್ತೆಯ ವಿದ್ಯುತ್ ತಂತಿಯಿಂದ ಹಾರಿದ ಕಿಡಿಯು ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು. ರಾತ್ರಿಯಾಗುತ್ತಿದ್ದಂತೆ ಕಿಡಿಗಳು ಮತ್ತಷ್ಟು ಪಸರಿಸಿ, ಜನವಸತಿ ಪ್ರದೇಶದವರೆಗೂ ಬೆಂಕಿ ಆವರಿಸಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಆಗಮಿಸಿ ಕಾರ್ಯಾಚರಣೆ ನಡೆಸಿದರು.

ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಸಾಥ್ ನೀಡಿದರು. ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಕಿ ಮನೆಗಳಿಗೆ ಹರಡುವುದು ತಪ್ಪಿದ್ದು, ಸಂಭವನೀಯ ಭಾರಿ ಅನಾಹುತವೊಂದು ದೂರವಾದಂತಾಗಿದೆ.

ವಿದ್ಯುತ್ ತಂತಿ ಹಾಗೂ ಟ್ರಾನ್ಸ್‌ಫಾರ್ಮರ್ ಬಳಿ ಸಂಚರಿಸುವಾಗ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಅಗ್ನಿಶಾಮಕದಳದವರು ಸಲಹೆ ನೀಡಿದ್ದಾರೆ.

LEAVE A REPLY

Please enter your comment!
Please enter your name here