ಆಳ್ವಾಸ್ ನ ಸಾದ್ವಿಗೆ ಶಿಕ್ಷಣ ಇಲಾಖೆಯಿಂದ ಅಭಿನಂದನೆ

0
130

ಮೂಡುಬಿದಿರೆಯ ಆಳ್ವಾಸ್ ವಿದ್ಯಾ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್. ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಕುಮಾರಿ ಸಾದ್ವಿ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಅವರ ಮನೆಗೆ ಹೋಗಿ ಅಭಿನಂದಿಸಲಾಯಿತು. ಈ ಬಾರಿ ಎಸ್. ಎಸ್. ಎಲ್. ಸಿ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಮೂಡುಬಿದಿರೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಶಿಕ್ಷಕರ, ಪಾಲಕರ, ಇಲಾಖೆಯ ಮಾರ್ಗದರ್ಶನದ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆ ಮತ್ತು ತಾಲೂಕು ಗುರುತಿಸಲ್ಪಟ್ಟಿದೆ.

ನಿರಂತರ ಪ್ರಯತ್ನ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡುವುದರ ಮೂಲಕ ಸಂಸ್ಥೆಗೆ, ಪೋಷಕರಿಗೆ, ಇಲಾಖೆಗೆ ಗೌರವವನ್ನು ತಂದು ಕೊಟ್ಟ ಕುಮಾರಿ ಸಾಧ್ವಿಗೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಿ.ಡಿ.ಪಿ.ಐ. ಶಶಿಧರ್ ಅವರು ಅಭಿನಂದನೆ ಸಲ್ಲಿಸಿದರು.

ಅವರ ಜೊತೆಯಲ್ಲಿ ಡಯಟ್ ಉಪನ್ಯಾಸಕರಾದ ಸುರೇಶ್, ತಾರೇಶ ನಾಯಕ್, ಮೂಡುಬಿದಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್, ಮೂಡುಬಿದಿರೆ ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು, ಕಡಬ ತಾಲೂಕಿನ ಸಹಶಿಕ್ಷಕ ಸಂಘದ ಅಧ್ಯಕ್ಷರಾದ ಶಾಂತರಾಮ ಮತ್ತು ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.

ಡಿ.ಡಿ.ಪಿ.ಐ. ಶಶಿಧರ್, ಮಹಮದ್ ರಿಯಾಜ್, ಡಾ.ರಾಮಕೃಷ್ಣ ಶಿರೂರು ವಿದ್ಯಾರ್ಥಿನಿಗೆ ಅಭಿನಂದನೆಸಲ್ಲಿಸಿ ಶುಭ ಹಾರೈಸಿದರು. ವಿದ್ಯಾರ್ಥಿನಿಯ ತಂದೆ ಪ್ರಭಾಕರ ಮತ್ತು ಮಮತಾ ಅವರು ತಮ್ಮ ಸಂತೋಷವನ್ನು ಹಂಚಿಕೊಂಡು ವಿದ್ಯಾ ಸಂಸ್ಥೆಗೆ ಮತ್ತು ಇಲಾಖೆಗೆ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here