ಸಿದ್ದಾಪುರ: ಉಡುಪಿ ಜಿಲ್ಲೆಯ ಶಂಕರನಾರಾಯಣ ಗ್ರಾಮದ ಕಟ್ಟೆಮಕ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ಮೂಡುತೋನ್ಸೆ ನಿವಾಸಿ ಶಂಕರ ಮೊಗವೀರ (58) ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಅವರು ತಮ್ಮ ಪತ್ನಿಯ ಮನೆ ಕಂಡ್ಲೂರಿನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಎಪ್ರಿಲ್ 26ರಂದು ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಶಂಕರ ಅವರು ತಮ್ಮ ಸ್ಕೂಟರ್‌ನಲ್ಲಿ ಮನೆಯಿಂದ ಹೊರಟು ಹೋಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೃತರ ಪುತ್ರ ಕಿಶನ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.

