ಮೂಡುಬಿದಿರೆ : ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಶಾಂತಿ ಪ್ರಸಾದ್ ಹೆಗ್ಡೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ ಕೆ. ಸತತ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಮರ್ವಿನ್ ಜಾನ್ಸನ್ ಲೋಬೋ ( ಜತೆ ಕಾರ್ಯದರ್ಶಿ) , ಶುಭ ಸಹನ ( ಕೋಶಾಧಿಕಾರಿ), ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀಕ್ಷಾ, ಕು. ರೂಪಾ , ಸಂಜನಾ ಎಚ್. ಆಯ್ಕೆಯಾಗಿದ್ಧಾರೆ. ಎಲ್ಲ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಹಿರಿಯ ನ್ಯಾಯವಾದಿ ಎಂ. ಸುಬ್ರಹ್ಮಣ್ಯ ತಂತ್ರಿ ಚುನಾವಣಾ ಅಧಿಕಾರಿಯಾಗಿ ಸಹಕರಿಸಿದರು.

