`ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಂಧೂರ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

0
8

ತ್ರಿಂಶತಿ ಸಂಭ್ರಮ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು : ವಿಶ್ವಪ್ರಸನ್ನ ತೀರ್ಥ ಶ್ರೀಪಾದರು

ಕಾರ್ಕಳ : ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಸುಸಜ್ಜಿತ ವಾಣಿಜ್ಯ ಸಂಕೀರ್ಣವನ್ನು ಲೋಕಾರ್ಪಣೆ ಮಾಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿದೆ ಎಂದು ಉಡುಪಿ ಶ್ರೀ ಪೇಜಾವರ ಅದೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಜೋಡುರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಸಹಕಾರ ಸಿಂಧೂರ ಲೋಕಾರ್ಪಣೆ ಮತ್ತು ತ್ರಿಂಶತಿ ಸಂಭ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಶ್ರೀ ಕೃಷ್ಣನ ಭೂಮಿಯಲ್ಲಿ ಬದುಕುವ ನಾವು ಅವನ ಸಂದೇಶದಂತೆ ಸಹಕಾರ ತತ್ವದಡಿ ನಾವು ಬದುಕುತ್ತಿದ್ದೇವೆ ಸಮಾಜದಿಂದ ಸಹಕಾರ ಸಹಕಾರದಿಂದ ಸಮಾಜ ಮುನ್ನಡೆಯಬೇಕೆಂದರು.
ಗೋವಾದ ಶ್ರೀ ಸಂಸ್ಥಾನ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿ ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಕ್ಕೆ ಮಾತ್ರ ಸೀಮಿತವಾಗಿರದೆ ಸಮಾಜದೊಂದಿಗೆ ಬೆರೆತುಕೊಂಡು ಕಾರ್ಯಚರಿಸಿದಾಗ ಸಹಕಾರ ಸಂಘಗಳು ಬೆಳೆಯುತ್ತದೆ ಎಂದರು. ಸೊಸೈಟಿ ವತಿಯಿಂದ ನಿರ್ಮಾಣವಾದ ವಾಣಿಜ್ಯ ಸಂಕೀರ್ಣವು ಸಮಾಜದ ಅಭಿವೃದ್ಧಿಯ ಬುನಾದಿಯಾಗಿದೆ ಎಂದರು.
ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರು ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಸಂಸ್ಥೆಯನ್ನು ಹುಟ್ಟು ಹಾಕುವುದು ಮುಖ್ಯವಲ್ಲ ಅದರೆ ಯಾವುದೇ ರೀತಿಯಲ್ಲೂ ಚ್ಯುತಿ ಬಾರದಂತೆ ಮುನ್ನಡೆಸುವುದು ಅಷ್ಟೇ ಮುಖ್ಯ ರಾಜಾಪುರ ಸಾರಸ್ವ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿಯು ೩೦ವರ್ಷಗಳಿಂದ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ವೆಂದರು.
ಶಾಸಕರಾದ ಸುನಿಲ್ ಕುಮಾರ್ ಸೊಸೈಟಿಯ ತ್ರಿಂಶತಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ರವೀಂದ್ರ ಪ್ರಭು ಅವರ ನೇತೃತ್ವದಲ್ಲಿ ಪ್ರತಿ ವರ್ಷ ಹೊಸ ಹೊಸ ಸಾಧನೆಯ ಮೆಟ್ಟಿಲುಗಳನ್ನು ಏರುತ್ತ ಬರುತ್ತಿದೆ. ರಾಜಾಪುರ ಸೊಸೈಟಿಯು ಕೇವಲ ಬ್ಯಾಂಕಿಂಗ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ ಸಮಾಜದಲ್ಲಿ ಇತರ ಚಟುವಟಿಕೆಯಲ್ಲೂ ತಮ್ಮ ಸೇವೆ ನೀಡುತ್ತ ಬಂದಿದೆ ಎಂದರು. ಈ ಭಾಗದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡುವ ಮೂಲಕ ಹೊಸ ಅಭಿವೃದ್ಧಿಗೆ ಹೆಜ್ಜೆ ಇಟ್ಟಿದೆ ಇದರೊಂದಿಗೆ ವಾಣಿಜ್ಯ ಸಂಕೀರ್ಣಕ್ಕೆ ಸಿಂಧೂರ ಎಂಬ ಹೆಸರು ಇಡುವ ಮೂಲಕ ರಾಷ್ಟ್ರೀಯತೆಯನ್ನು ಬಿಂಬಿಸಿರುವುದು ಶ್ಲಾಘನೀಯ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೇಶದಲ್ಲಿ ಶೇ.೩೦ರಷ್ಟು ಜನರು ಒಂದಲ್ಲ ಒಂದು ವಿಧದಲ್ಲಿ ತಮ್ಮನ್ನು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಮುಂದಿನ ೫ ವರ್ಷಗಳಲ್ಲಿ ಶೇ.೬೦ರಷ್ಟು ಜನತೆ ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.
ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಹಕಾರಿ ರತ್ನ ಕಡಾರಿ ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿ ಸೊಸೈಟಿಯು ಕೇವಲ ಆರ್ಥಿಕ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಎಂದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು, ಮಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ ದಾಸ್ ನಾಯಕ್, ಶ್ರೀ ಕ್ಷೇತ್ರ ಅಡಪಾಡಿ ದೇವಸ್ಥಾನದ ಧರ್ಮದರ್ಶಿ ಪುಂಡಲೀಕ ನಾಯಕ್, ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಚೇತನ್ ನಾಯಕ್, ಉದ್ಯಮಿ ಸಂತೋಷ್ ವಾಗ್ಳೆ, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ರೆ ರವೀಂದ್ರ ನಾಯಕ್ ಸ್ವಾಗತಿಸಿ, ಸಿಇಒ ಸುರೇಂದ್ರ ನಾಯಕ್ ವಂದಿಸಿ, ಸಂತೋಷ್ ಶೆಟ್ಟಿ ನಿರೂಪಿಸಿದರು.
ಈ ಸಂಧರ್ಭದಲ್ಲಿ ಸೊಸೈಟಿಯ ಅದ್ಯಕ್ಷರಾದ ಕಡಾರಿ ರವೀಂದ್ರ ಪ್ರಭು ಹಾಗೂ ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿದವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here