ಮಂಗಳೂರು : ಪೋಷಕ–ಶಿಕ್ಷಕ–ವಿದ್ಯಾರ್ಥಿ ಸಭೆ

0
6

ಮಂಗಳೂರು : ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 27, 2026ರಂದು 2:00 ಗಂಟೆಗೆ ಪೋಷಕ–ಶಿಕ್ಷಕ–ವಿದ್ಯಾರ್ಥಿ ಸಭೆ (PTSM) ಯಶಸ್ವಿಯಾಗಿ ನಡೆಯಿತು.

ಸಭೆಗೆ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾನ್ ಅವರು ಕಾಲೇಜಿನ ದೃಷ್ಟಿಕೋನ, ಶೈಕ್ಷಣಿಕ ಮೇಲುಗೈ, ಶಿಸ್ತು ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಆನ್ಲೈನ್ ಮುಖಾಂತರ ವಿದ್ಯಾರ್ಥಿಗಳ ಹಾಜರಾತಿ ಹಾಕುವ ಟೀಚ್ ಅಸ್ ಆಪ್‌ನ ವೈಶಿಷ್ಟ್ಯಗಳು ಹಾಗೂ ಅದರ ಉಪಯೋಗಗಳ ಬಗ್ಗೆ ವಿವರಿಸಿ, ಪೋಷಕರು ವಿದ್ಯಾರ್ಥಿಗಳ ಹಾಜರಾತಿ, ಶೈಕ್ಷಣಿಕ ಪ್ರಗತಿ ಮತ್ತು ಅಧಿಸೂಚನೆಗಳನ್ನು ಸುಲಭವಾಗಿ ಗಮನಿಸಲು ಇದು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೋಷಕ–ಶಿಕ್ಷಕ ಸಂಘದ ಅಧ್ಯಕ್ಷರಾದ ಶಾಂತಿ ಭಂಡಾರಿ ಅವರ ಉಪಸ್ಥಿತಿಯಿಂದ ಕಾರ್ಯಕ್ರಮದ ಗಂಭೀರತೆಯನ್ನು ಹೆಚ್ಚಿಸಿದರು. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ನಿರ್ವಹಣಾ ಮಂಡಳಿ, ಅಧ್ಯಾಪಕರು ಮತ್ತು ಪೋಷಕರು ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಮಾಡುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಉತ್ತಮ ಸಹಕಾರದ ಅಗತ್ಯತೆಯನ್ನು ಒತ್ತಿ ಹೇಳಿದರು. ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ತಮವಾದ ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ತಮವಾದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಬೆಳೆಸುವಂತೆ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ಹಾಜರಿದ್ದು, ಪೋಷಕರೊಂದಿಗೆ ಸಂವಹನ ನಡೆಸಿದರು. ಚರ್ಚಾ ಅವಧಿಯಲ್ಲಿ ಪೋಷಕರು ಸಕ್ರಿಯವಾಗಿ ಭಾಗವಹಿಸಿ ಅಮೂಲ್ಯ ಸಲಹೆಗಳನ್ನು ಹಂಚಿಕೊಂಡರು.

ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ರೂಪಾ ರಾವ್ ಕೆ ಅವರು ಸ್ವಾಗತಿಸಿದರು. ವ್ಯವಹಾರ ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ತಿಲಕ್ ಗೌಡ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಆಹಾರ, ಪೋಷಣಾ ಮತ್ತು ಡಯಟೆಟಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕುಮಾರಿ ಕೇತನಾ ಕೆ.ಎಸ್. ಅವರು ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸುಸೂತ್ರವಾಗಿ ಕೊನೆಗೊಂಡಿತು.

LEAVE A REPLY

Please enter your comment!
Please enter your name here