ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ

0
101

ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿದ್ದ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮಾರ್ಚ್ 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಪತ್ನಿ ಸೌಮ್ಯ ಶೆಟ್ಟಿ ಪ್ರಚೋದನೆ ನೀಡಿದ ಆರೋಪದಡಿ ಸುದೀಪ್ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಮುಂದುವರಿದ ಹಿನ್ನೆಲೆ, ಏಪ್ರಿಲ್ 11ರಂದು ಉಡುಪಿಯಲ್ಲಿ ಪೊಲೀಸರು ಸೌಮ್ಯ ಶೆಟ್ಟಿಯನ್ನು ಬಂಧಿಸಿದ್ದರು. ನಂತರ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ನ್ಯಾಯಾಲಯ, ಆರೋಪದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಿದೆ.

ಈ ಪ್ರಕರಣದ ತನಿಖೆಯನ್ನು ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here