ಕಾರ್ಕಳ: ಅಡುಗೆ ಅನಿಲ (ಎಲ್‌ಪಿಜಿ) ದರ ಏರಿಕೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ಹಾಗೂ ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಪ್ರತಿಭಟನೆ ದಿನಾಂಕ 06.05.2026 ಬುಧವಾರ ಸಂಜೆ 5 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಲಿದೆ.
ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಧ್ವನಿಗೂಡಿಸಲು ಅವರು ಕರೆ ನೀಡಿದ್ದಾರೆ.
