ಮೂಡುಬಿದಿರೆ : ಡಾ. ಶಿರೂರು ಅವರಿಗೆ ವಿಶ್ವಕವಿ ಠಾಗೋರ್ ಪ್ರಶಸ್ತಿ ಪ್ರದಾನ

0
38

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರಿಗೆ ಧಾರವಾಡದಲ್ಲಿ ವಿಶ್ವಕವಿ ರವೀಂದ್ರನಾಥ್ ಠಾಗೋರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಅಕ್ಷರದಿಂದ ಪ್ರತಿಷ್ಠಾನ ರಾಷ್ಟ್ರೀಯ ಸಾಹಿತ್ಯೋತ್ಸವ ಸಂದರ್ಭದಲ್ಲಿ ರವೀಂದ್ರನಾಥ ಟಾಗೋರ್ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಶಿಕ್ಷಣ ಕ್ಷೇತ್ರಕ್ಕೆ, ಶಿಕ್ಷಕ ಸಂಘಟನಾ ಕ್ಷೇತ್ರಕ್ಕೆ, ಸಾಹಿತ್ಯ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಷರದೀಪ ಪ್ರತಿಷ್ಠಾನದ ರಾಜ್ಯ ಅಧ್ಯಕ್ಷರಾದ ಪ್ರೊ. ಪ್ರವೀಣ್ ಕುಮಾರ್ ಕನ್ಯಾಳ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಬೆಳಗಾವಿಯ ಹಿರಿಯ ನ್ಯಾಯವಾದಿ ಬಸವರಾಜ ಯರಗಣವಿ, ನ್ಯಾಯವಾದಿಗಳು ಕೃಷಿ ವಿಜ್ಞಾನಿಗಳು ಆಗಿರುವ ಶ್ರೀ ಮೃತ್ಯುಂಜಯ ವಸ್ತ್ರದ, ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಗಿರೀಶ್ ದೇಸೂರು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಆದರ್ಶ ಶಿಕ್ಷಕಿ ಶ್ರೀಮತಿ ಸುರಯ್ಯ ನದಾಫ್, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀ ಗಣಪತಿ ಹೆಗಡೆ ದಾಂಡೇಲಿ ನೂರಾರು ಸಾಹಿತ್ಯ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here