ಮಂಗಳೂರು, ಮೇ 5: ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ವತಿಯಿಂದ ಸ್ವಸ್ತಿಕ ವಾಟರ್‌ಫ್ರಂಟ್, ಸುಲ್ತಾನ್ ಬತ್ತೇರಿ ನಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ನಿರ್ವಹಣಾ ಹಾಗೂ ಸಾಂಸ್ಕೃತಿಕ ಉತ್ಸವ “SPARK 2K26” ಯಶಸ್ವಿಯಾಗಿ ನೆರವೇರಿತು. 10ಕ್ಕೂ ಹೆಚ್ಚು ಕಾಲೇಜುಗಳಿಂದ 250ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, Skill, Personality, Attitude, Resourcefulness, and Knowledge ಎಂಬ ಆಶಯವನ್ನು ಪ್ರತಿಬಿಂಬಿಸಿದರು. ಕಾರ್ಯಕ್ರಮವನ್ನು ಅಗಾರಿ ಎಂಟರ್‌ಪ್ರೈಸಸ್‌ನ ಪ್ರೊಪ್ರೈಟರ್ ಶ್ರೀ ರಾಘವೇಂದ್ರ ರಾವ್ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

ಕಾರ್ಯಕ್ರಮಕ್ಕೆ ಪ್ರಾಂಶುಪಾಲೆ ಡಾ. ಮಾಲಿನಿ ಎನ್ ಹೆಬ್ಬಾರ್ ಸ್ವಾಗತ ಕೋರಿದರು. ನಂತರ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್ ಪರಿಚಯ ಭಾಷಣದಲ್ಲಿ SPARK 2K26 ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ನಾಯಕತ್ವ ಮತ್ತು ಆತ್ಮವಿಶ್ವಾಸವನ್ನು ಹೊರತರುವ ವೇದಿಕೆಯಾಗಿದೆ ಎಂದು ಹೇಳಿದರು. ಅಧ್ಯಕ್ಷೀಯ ಭಾಷಣವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ರಾಘವೇಂದ್ರ ಹೊಳ್ಳ ಎನ್ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಡೀಕ್ಶಾ ದೇವಾಡಿಗ ಧನ್ಯವಾದ ಅರ್ಪಿಸಿದರು. ವಿವಿಧ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ತಂಡದ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಯಲ್ಲಿ SDM ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್, ಮಂಗಳೂರು ಒಟ್ಟಾರೆ ಚಾಂಪಿಯನ್ ಪಟ್ಟವನ್ನು ಗೆದ್ದಿತು.
ಸಮಾರೋಪ ಸಮಾರಂಭದಲ್ಲಿ ಡಾ. ಫ್ರಾನ್ಸಿಸ್ಕಾ ತೇಜ್ ಮತ್ತು ಡಾ. ಸುಪ್ರಿತಾ ಆರ್ ಕೆ ಸಭೆಯನ್ನುದ್ದೇಶಿಸಿ ಮಾತನಾಡಿ, ಆಯೋಜಕರ ಮತ್ತು ವಿದ್ಯಾರ್ಥಿಗಳ ಪ್ರಯತ್ನವನ್ನು ಪ್ರಶಂಸಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕೊನೆಯಲ್ಲಿ ಮುಳಿಯ ಸಾತ್ವಿಕ್ ಧನ್ಯವಾದ ಅರ್ಪಿಸಿದರು. ಈ ಸಮಗ್ರ ಕಾರ್ಯಕ್ರಮವು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್ ಅವರ ನೇತೃತ್ವದಲ್ಲಿ, ಉಪಾಧ್ಯಕ್ಷೆ ಸಿಂಚನಾ, ಕಾರ್ಯದರ್ಶಿ ಸಿಂಧು ಎಂ, ಸಂಯೋಜಕರಾದ ಸುದೀಪ್ ಪ್ರಭು ಮತ್ತು ಪೂಜಾ ಆಚಾರ್ಯ ಅವರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯಿತು.

