ನೆಲ್ಯಾಡಿ : ಬೈಕ್ – ಕಾರು ಮುಖಾಮುಖಿ ಡಿಕ್ಕಿ : ಪತಿ ಮೃತ್ಯು, ಪತ್ನಿಗೆ ಗಂಭೀರ ಗಾಯ..!

0
42

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಘಾಟಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರಾದ ಸದಾನಂದ ಆಚಾರ್ (55) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿದ್ದು, ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here