ಕೇರಳದ ಶಿವಗಿರಿ ಮಠದ ಪದ್ಮಶ್ರೀ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರ ಭೇಟಿ

0
3


ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2019 ರಲ್ಲಿ ರಾಷ್ಟçದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃ ತರಾದ ಪದ್ಮಶ್ರೀ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರು ಕೇರಳದ ಅಲಪುö್ಪಝ ಜಿಲ್ಲೆಯ ಕಾಯಂಕುಳ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 48ಕ್ಕೂ ಮಿಕ್ಕಿ ಅನುಯಾಯಿಗಳೊಂದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಛೇರಿ ಆತ್ಮಶಕ್ತಿ ಸೌಧ, ಪಡೀಲ್, ಮಂಗಳೂರು ಇಲ್ಲಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಸಂಘದ ವತಿಯಿಂದ ಪದ್ಮಶ್ರೀ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರನ್ನು ಪೂಜ್ಯ ಭಾವದಿ ಯೋಗ್ಯ ಬಗೆಯಲ್ಲಿ ಸತ್ಕರಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ವಿಶ್ವನಾಥ, ಹಿರಿಯ ಶಾಖಾಧಿಕಾರಿಯಾದ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿಯಾದ ರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here