ಅಪಘಾತಗಳ ಹಾಟ್‌ಸ್ಪಾಟ್‌ ಆಗಿದೆಯೇ ಬನ್ನಡ್ಕ? ಮತ್ತೆ ನಿಯಂತ್ರಣ ತಪ್ಪಿದ ಕಾರು

0
2

ಹೆದ್ದಾರಿಯಲ್ಲಿ ನಿಂತ ಮಳೆ ನೀರೇ ಅಪಾಯ – ಬನ್ನಡ್ಕದಲ್ಲಿ ಕಾರು ಭೀಕರ ಅಪಘಾತ


ಮಳೆ ನೀರು ನಿಂತಿದ್ದ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ – ಕಾರಿನ ಮುಂಭಾಗ ಜಖಂಗೊಂಡು ನಜ್ಜುಗುಜ್ಜು


ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಬನ್ನಡ್ಕ ಪ್ರದೇಶದಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಗೊಂಡಿರುವ ನಡುವೆಯೇ ಇಂದು ಮತ್ತೊಂದು ಅಪಘಾತ ಸಂಭವಿಸಿದೆ. ಈ ಭಾಗದಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಸಮಸ್ಯೆ ಮುಂದುವರಿದಿದೆ.
ಇಂದು ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕಾರೊಂದು ಜೋರಾದ ಮಳೆಯ ವೇಳೆ ಹೆದ್ದಾರಿಯಲ್ಲಿ ನೀರು ನಿಂತಿದ್ದುದನ್ನು ಗಮನಿಸದೆ ಸಾಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಘಟನೆಯ ತೀವ್ರತೆ ಸ್ಪಷ್ಟವಾಗಿದೆ. ಘಟನೆಯಲ್ಲಿ ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳೀಯರು ಹೆದ್ದಾರಿಯ ಈ ಭಾಗದಲ್ಲಿ ನೀರು ನಿಲ್ಲುವ ಸಮಸ್ಯೆ ಹಾಗೂ ಸುರಕ್ಷತಾ ಕ್ರಮಗಳ ಕೊರತೆಯೇ ನಿರಂತರ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here