ಕನ್ನಡಿಕಟ್ಟೆಯಲ್ಲಿ ಭೀಕರ ರಸ್ತೆ ಅಪಘಾತ : ಮಹಿಳೆ ಮೃತ..!

0
58

ಬೆಳ್ತಂಗಡಿ : ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲಕ ಹಾಗೂ ಪ್ರಗತಿಪರ ಕೃಷಿಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅನಿಲ್ ಭಟ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪುತ್ರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅನಿಲ್ ಭಟ್ ಹಾಗೂ ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್‌ನ ಕೆಲಸ ಮುಗಿಸಿ ಬೈಕ್‌ನಲ್ಲಿ ತಮ್ಮ ಸೈಟ್‌ಗೆ ತೆರಳುತ್ತಿದ್ದ ವೇಳೆ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಢಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here