ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಮಲ್ಪೆ ಕಡಲಕಿನಾರೆಯ ಆನಂದ ಶರಧಿಯಲ್ಲಿ ಮಾವು-ಹಲಸು ಕೃಷಿ ಮೇಳ, ಗುಡಿಕೈಗಾರಿಕೆ, ಕರಕುಶಲ ವಸ್ತುಗಳ ಪ್ರದರ್ಶನ ಮಾರಾಟ ಮೇಳಗಳನ್ನು, ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಸಿ ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಕಾಸರಗೋಡಿನ ಪದ್ಮಶ್ರೀ ನಾರಾಯಣ ಬೆಳೇರಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ಕಿಶೋರ್ ಡಿ.ಸುವರ್ಣ, ಮಲ್ಪೆ ಹಸಿಮೀನು ವ್ಯಾಪಾರಸ್ಥ ಸಂಘದ ಅಧ್ಯಕ್ಷರಾದ ಬೇಬಿ ಎಸ್. ಸಾಲಿಯಾನ್, ಉಡುಪಿ ಜಿಲ್ಲಾ ನೇಕಾರ ಸಂಘದ ಅಧ್ಯಕ್ಷರಾದ ರತ್ನಾಕರ ಇಂದ್ರಾಳಿ, ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ರತ್ನಕುಮಾರ್ ಉಪಸ್ಥಿತರಿದ್ದರು.

