ಶ್ರೀ ಗಾಯಿತ್ರಿ ಪರಿವಾರದ ಆಶ್ರಯದಲ್ಲಿ ಅಧಿಕ ಕಾರ ಹುಣ್ಣಿಮೆ ಅಂಗವಾಗಿ ಮೇ 31 ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ ಹಾಗೂ ಉಪಾಸನೆ ಕಾರ್ಯಕ್ರಮ

0
8

ದಾವಣಗೆರೆ : ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಅಧಿಕ ಕಾರ ಹುಣ್ಣಿಮೆ ಅಂಗವಾಗಿ ದಿನಾಂಕ 31-05-2026 ರಂದು ಭಾನುವಾರ ಬೆಳಿಗ್ಗೆ 7-00ಕ್ಕೆ ನಡೆಯಲಿದೆ ಎಂದು ಶ್ರೀ ಗಾಯಿತ್ರಿ ಪರಿವಾರದ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್ ತಿಳಿಸಿದ್ದಾರೆ.

ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಈ ಅಪ್ಪಟ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರಾದ ಬಿ.ಸತ್ಯನಾರಾಯಣ ಮೂರ್ತಿ ಮತ್ತು ಕುಟುಂಬದವರು ಆಧ್ಯಾತ್ಮಿಕ ಪರಂಪರೆಯ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ ಇಪ್ಪತ್ತೆöÊದು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here