ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ನೇಹ ಸಮ್ಮಿಲನ ಕಾರ್ಯಕ್ರಮ

0
22

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ – ನಂದಳಿಕೆ ನೇತೃತ್ವದಲ್ಲಿ ಅಬ್ಬನಡ್ಕ ವಾಸು ಕೆ ಪೂಜಾರಿಯವರ ಶಿವದುರ್ಗಾನುಗ್ರಹ ನಿಲಯದಲ್ಲಿ ಆದಿತ್ಯವಾರ “ಸ್ನೇಹ ಸಮ್ಮಿಲನ ಕಾರ್ಯಕ್ರಮ” ಜರಗಿತು.

ಸಂಘದ ಸದಸ್ಯರಲ್ಲಿ ಒಗ್ಗಟ್ಟು ಹಾಗೂ ಸ್ನೇಹ ಮನೋಭಾವನೆಯನ್ನು ವೃದ್ಧಿಸುವ ಸಲುವಾಗಿ ಈ ವಿಶೇಷ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಯಿತು.

ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ – ನಂದಳಿಕೆ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ನಿರ್ದೇಶಕರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು ಅವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಸುರೇಶ್ ಕಾಸರಬೈಲ್, ವೀಣೇಶ್ ಅಮೀನ್, ಪೂರ್ವಿ ರಾವ್ ಅವರು ಸುಮಧುರ ಸಂಗೀತ ಕಾರ್ಯಕ್ರಮ ನೀಡಿದರು.

ನ್ಯಾಯವಾದಿ ರೇಖಾ ಎಸ್. ಪೂಜಾರಿ, ಯುವ ಉದ್ಯಮಿ ಪ್ರೇಮ ಕುಲಾಲ್, ಟೈಮ್ಸ್ ಆಫ್ ಕಾರ್ಕಳ ಇದರ ಮುಖ್ಯಸ್ಥರಾದ ಪ್ರಶಾಂತ್ ಆಚಾರ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ – ನಂದಳಿಕೆ ಇದರ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ದಿನೇಶ್ ಪೂಜಾರಿ, ಸತೀಶ್ ಪೂಜಾರಿ, ಸದಸ್ಯರಾದ ಸುಲೋಚನ ಕೋಟ್ಯಾನ್, ವೀಣಾ ಪೂಜಾರಿ, ಲೀಲಾ ಪೂಜಾರಿ, ಆರತಿ, ಸುಭಾಷ್ ಕುಮಾರ್, ಹರಿಣಿ ಪೂಜಾರಿ, ಹರೀಶ್ ಪೂಜಾರಿ, ಪುಷ್ಪ ಕುಲಾಲ್, ಶಾಂತರಾಮ್ ಕುಲಾಲ್, ಶ್ರೀಕಾಂತ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಸೂಡ ರವಿರಾಜ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here