“ಗೃಹಲಕ್ಷ್ಮಿ” ಮಹಿಳೆಯರಿಗೆ ಡಬಲ್ ಖುಷಿ: 30ನೇ ಕಂತಿನ ₹2000 ಇಂದಿನಿಂದ ಖಾತೆಗೆ ಜಮಾ!

0
24

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಯ 30ನೇ ಕಂತಿನ ₹2000 ಸಹಾಯಧನವನ್ನು ಇಂದಿನಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಮೇ 20ರಿಂದ ಜಿಲ್ಲೆಯ ಮಹಿಳಾ ಫಲಾನುಭವಿಗಳ ಖಾತೆಗೆ ಡಿಬಿಟಿ (DBT) ಮೂಲಕ ಹಣ ವರ್ಗಾವಣೆ ಪ್ರಾರಂಭವಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ತಿಳಿಸಿದ್ದಾರೆ.

2026ರ ಏಪ್ರಿಲ್ ತಿಂಗಳಲ್ಲಿ ಮಾತ್ರ ಕೊಪ್ಪಳ ಜಿಲ್ಲೆಯ 3,09,274 ಮಹಿಳಾ ಫಲಾನುಭವಿಗಳಿಗೆ ಸುಮಾರು ₹61.85 ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದೆ. ಯೋಜನೆ ಜಾರಿಯಾದ ನಂತರ ಇದುವರೆಗೆ ಜಿಲ್ಲೆಯ ಅರ್ಹ ಮಹಿಳೆಯರಿಗೆ ಒಟ್ಟು 30 ಕಂತುಗಳಲ್ಲಿ ₹1860 ಕೋಟಿಗೂ ಅಧಿಕ ಹಣ ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿದೆ. ಒಬ್ಬೊಬ್ಬ ಮಹಿಳೆಗೆ ಈಗಾಗಲೇ ₹60,000 ಸಹಾಯಧನ ಸಿಕ್ಕಂತಾಗಿದೆ.

ಈ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗಿದ್ದು, ಕುಟುಂಬದ ನಿರ್ವಹಣೆ, ಮನೆಯ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೆ ಮಹತ್ವದ ನೆರವಾಗುತ್ತಿದೆ. ಯಾವುದೇ ಮಧ್ಯವರ್ತಿಗಳಿಲ್ಲದೆ ಸರ್ಕಾರದಿಂದ ನೇರವಾಗಿ ಸಹಾಯಧನ ಸಿಗುತ್ತಿರುವುದು ಯೋಜನೆಯ ವಿಶೇಷತೆ ಎಂದು ಹೇಳಿದರು.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ Shivaraj S. Tangadagi ಅವರ ಮಾರ್ಗದರ್ಶನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರೆಡ್ಡಿ ಶ್ರೀನಿವಾಸ ಹೇಳಿದರು.

ಇನ್ನೂ ತಾಂತ್ರಿಕ ಸಮಸ್ಯೆಗಳ ಕಾರಣ ಜಿಲ್ಲೆಯ 1302 ಫಲಾನುಭವಿಗಳ ಸಹಾಯಧನ ಸರ್ಕಾರಕ್ಕೆ ವಾಪಸ್ ಆಗಿದ್ದು, ಇ-ಕೆವೈಸಿ, ಆಧಾರ್ ಲಿಂಕ್, ಬ್ಯಾಂಕ್ ಸೀಡಿಂಗ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಳ್ಳುವಂತೆ ಮಹಿಳೆಯರಿಗೆ ಸೂಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಮಸ್ಯೆ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಖಜಾನೆ ಇಲಾಖೆಯ ಎನ್‌ಟಿಟಿಎಐ ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದ್ದು, ಮೇ 19ರಿಂದ ಜಿಲ್ಲೆಯ ಎಲ್ಲಾ ಫಲಾನುಭವಿಗಳ ಖಾತೆಗೆ ಒಂದೇ ಹಂತದಲ್ಲಿ ಸಹಾಯಧನ ಜಮಾ ಆಗಲಿದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here