ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ..!

0
41

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರುನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಜಾಪುರ ರಸ್ತೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಓದಿನ ಜೊತೆಗೆ ಬಿಡುವಿನ ವೇಳೆಯಲ್ಲಿ ಮೋಮೋಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಈ ವೇಳೆ ಅಂಗಡಿ ಮಾರಾಟ ವಿಚಾರವಾಗಿ ನಡೆದ ಪಾರ್ಟಿಯ ಸಂದರ್ಭ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮೋಮೋಸ್ ಅಂಗಡಿ ಮಾಲೀಕರಾದ ಘೋಷ್ ಹಾಗೂ ಅತುಲ್ ಅಂಗಡಿ ಮಾರಾಟಕ್ಕೆ ಮುಂದಾಗಿದ್ದು, ಹೈನಾಸ್ ಎಂಬಾತ ಮಧ್ಯವರ್ತಿಯಾಗಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ಸಂಬಂಧ ಎಲ್ಲರೂ ಸೇರಿ ಪಾರ್ಟಿ ಮಾಡುತ್ತಿದ್ದ ವೇಳೆ, ಘೋಷ್ ಹಾಗೂ ಅತುಲ್ ಊಟ ತರಲು ಹೊರಗೆ ತೆರಳಿದ್ದರು. ಇದೇ ವೇಳೆ ಹೈನಾಸ್ ಯುವತಿಯ ಮೇಲೆ ಜ್ಯೂಸ್ ಚೆಲ್ಲಿ ಅಸಭ್ಯವಾಗಿ ವರ್ತಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಬಳಿಕ ಸಂತ್ರಸ್ತ ಯುವತಿ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದಾಗ, ಅಲ್ಲಿನ ಕೆಲ ಪೊಲೀಸರು ಯುವತಿಯನ್ನು ಹೀಯಾಳಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಇದರಿಂದ ಮನನೊಂದ ಯುವತಿ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ಬಳಿಕ ಮಹಿಳಾ ಸುರಕ್ಷತೆ ಹಾಗೂ ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತೆಯರೊಂದಿಗೆ ನಡೆಯುವ ವರ್ತನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here