ಮನೆಗಳಲ್ಲೇ ನಡೆಯುತ್ತಿದ್ದ ಅನೈತಿಕ ದಂಧೆ ಮೇಲೆ ಪೊಲೀಸರ ದಾಳಿ ; 8 ಮಹಿಳೆಯರ ರಕ್ಷಣೆ

0
7

ಬಳ್ಳಾರಿ : ನಗರದ ವಿವಿಧ ಪ್ರದೇಶಗಳಲ್ಲಿ ಗುಪ್ತವಾಗಿ ನಡೆಯುತ್ತಿದ್ದ ಅನೈತಿಕ ದಂಧೆಗೆ ಪೊಲೀಸರು ಭಾರೀ ಕಡಿವಾಣ ಹಾಕಿದ್ದಾರೆ. ಗಾಂಧಿನಗರ, ಎಪಿಎಂಸಿ ಹಾಗೂ ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು.

ಮೂರು ಪೊಲೀಸ್ ಠಾಣೆಗಳ ಅಧಿಕಾರಿಗಳು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿದ ವೇಳೆ ಅನೈತಿಕ ದಂಧೆಯಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸಲಾಗಿದೆ. ದಾಳಿ ಸಂದರ್ಭದಲ್ಲಿ 8 ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಪೊಲೀಸರ ದಾಳಿ ವೇಳೆ ಅನೈತಿಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಗಾಂಜಾ, ಜೂಜಾಟದ ಜೊತೆಗೆ ಅನೈತಿಕ ದಂಧೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here