ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ಪ್ರತಿಭಾ ಪ್ರದರ್ಶನ ಹಾಗೂ 2025-26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು.
ವಿಶ್ವನಾಥ್ ಶೇಟ್ CFO ಡೆಸಾಲ್ಟ್ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ ಕಾಲೇಜಿನ ಅಭಿವೃದ್ಧಿಗೆ ನೂತನ ಸಭಾಂಗಣ ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದರು.
ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅಗತ್ಯವೆಂದು ಹೇಳಿದರು.ಕಾಲೇಜು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗುತ್ತವೆ ನೂತನ ಸಭಾಂಗಣವು ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವದ ಕೇಂದ್ರವಾಗಲಿದೆ ಎಂದು ಹೇಳಿದರು.
ಶಾಸಕ ಗುರುರಾಜ್ ಗಂಟಿಹೊಳೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಿಎಸ್ಆರ್ ಬೆಂಬಲದೊಂದಿಗೆ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಅಭಿವೃದ್ಧಿಗೆ ಹಲವಾರು ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಶ್ಲಾಘನೀಯವೆಂದು ಹೇಳಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಮತ್ತು ಶಿಕ್ಷಣ ಸೌಲಭ್ಯ ಸಹಭಾಗಿತ್ವ ಅಗತ್ಯವಾಗಿದೆ ಎಂದರು.
ನಾಗರಾಜ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಂಸ್ಥೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಾ ಅತ್ಯುತ್ತಮ ಉಪನ್ಯಾಸಕರ ಮಾರ್ಗದರ್ಶನದ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದಾರೆ,ಕಾಲೇಜು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಬೆಳವಣಿಗೆಯ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
ಕಾಲೇಜು ಅಭಿವೃದ್ಧಿಗೆ ಸಹಕರಿಸಿದ ದಾನಿಗಳಿಗೆ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದ್ದು, ಈ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ಪ್ರಥಮ ದರ್ಜೆ ಗುತ್ತಿಗೆದಾರರು ಬೈಂದೂರು, ಗಿರೀಶ್ ಬೈಂದೂರು ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿ,ರಾಜು ಪೂಜಾರಿ ಮಾಜಿ ಅಧ್ಯಕ್ಷರು ಜಿಲ್ಲಾ ಪಂಚಾಯತ್ ಉಡುಪಿ, ದಯಾನಂದ ಹೋಬಳಿದಾರ್ ಮಾಜಿ ಸದಸ್ಯರು ವ್ಯವಸ್ಥಾಪನ ಸಮಿತಿ ಶ್ರೀ ಕ್ಷೇತ್ರ ಕೊಲ್ಲೂರು, ವೆಂಕಟರಮಣ ಬಿ ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜ್ ಬೈಂದೂರು, ಪ್ರಕಾಶ್ಚಂದ್ರ ಶೆಟ್ಟಿ ಕಾಲ್ತೋಡು, ವಸಂತ್ ಪೂಜಾರಿ ಬೈಂದೂರು,ಬೋಧಕ-ಬೋಧಕೇತರ ವರ್ಗ, ಕಾಲೇಜು ಅಭಿವೃದ್ಧಿ ಸಮಿತಿ, ಕಾಲೇಜಿನ ಎಲ್ಲಾ ಸಮಿತಿಗಳ ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿ ಸಂಘ (ರಿ), ಸಮಸ್ತ ಪಾಲಕ ವೃಂದ ಉಪಸಿತರಿದ್ದರು.
ಶಿಕ್ಷಕರದ ಮಣಿಕಂಠ ಸನ್ಮಾನ ಪತ್ರ ವಾಚಿಸಿದರು.ಉಪನ್ಯಾಸಕರಾದ ಶರ್ಮಿಳಾ ಹಾಗೂ ಸುಚಿತ್ರಾ ನಿರೂಪಿಸಿದರು, ಉಪನ್ಯಾಸಕ್ಕೆ ಮಮತಾ ಸ್ವಾಗತಿಸಿದರು. ಉಪನ್ಯಾಸಕರಾದ ಡಾ ಶಿವಕುಮಾರ್ ಪಿ ವಿ ವಂದಿಸಿದರು.

