ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರನ ಹುಚ್ಚಾಟ ; ಡಾನ್ಸ್ ಮಾಡುತ್ತಾ ಅಪಾಯಕಾರಿ ರೈಡ್..!

0
19

ಬನ್ನಡ್ಕ : ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ-ಬೆಳುವಾಯಿ ಮಾರ್ಗದಲ್ಲಿ ಬೈಕ್ ಸವಾರನೊಬ್ಬ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣನಾಗಿದ್ದಾನೆ.

ಬೈಕ್ ಚಲಾಯಿಸುತ್ತಿದ್ದ ವೇಳೆ ಸವಾರನು ಹ್ಯಾಂಡಲ್‌ಬಾರ್‌ನಿಂದ ಎರಡೂ ಕೈಗಳನ್ನು ಬಿಟ್ಟು ಡಾನ್ಸ್ ಮಾಡುತ್ತಾ, ವಿವಿಧ ಸನ್ನೆಗಳನ್ನು ಪ್ರದರ್ಶಿಸುತ್ತಾ ಯದ್ವಾತದ್ವಾ ವಾಹನ ಚಲಾಯಿಸಿರುವುದು ಕಂಡುಬಂದಿದೆ. ಈಗಾಗಲೇ ಅಪಘಾತ ವಲಯವಾಗಿ ಗುರುತಿಸಲ್ಪಟ್ಟಿರುವ ಈ ರಸ್ತೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆಯ ವೇಳೆ ಕಾರಿನಲ್ಲಿ ಸಾಗುತ್ತಿದ್ದ ಕೆಲ ಯುವಕರು ಬೈಕ್ ಸವಾರನ ಅಪಾಯಕಾರಿ ಚಾಲನೆಯನ್ನು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಬಳಿಕ ಬೈಕ್ ನಿಲ್ಲಿಸಿ ಆತನನ್ನು ತರಾಟೆಗೆ ತೆಗೆದುಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹ ಬೇಜವಾಬ್ದಾರಿ ಚಾಲನೆ ಸವಾರನ ಜೀವಕ್ಕೂ, ಇತರ ವಾಹನ ಸವಾರರ ಸುರಕ್ಷತೆಯಕ್ಕೂ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿರುವ ಹಿನ್ನೆಲೆ, ಇಂತಹ ಸ್ಟಂಟ್ ಹಾಗೂ ಹುಚ್ಚಾಟ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದು ಗಂಭೀರ ಅಪಾಯಕ್ಕೆ ಕಾರಣವಾಗಬಹುದು, ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂತಹ ಸ್ಟಂಟ್‌ಗಳು ದೊಡ್ಡ ದುರಂತಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಯುವಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಇಂತಹ ಹುಚ್ಚಾಟಗಳು ಹೆಚ್ಚಾಗುತ್ತಿದ್ದು, ಇದು ಸವಾರನ ಜೀವಕ್ಕೂ ಹಾಗೂ ಇತರ ವಾಹನ ಸವಾರರ ಸುರಕ್ಷತೆಯಕ್ಕೂ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

LEAVE A REPLY

Please enter your comment!
Please enter your name here