ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

0
7

ಜೀರ್ಣೋದ್ಧಾರಗೊಳ್ಳುತ್ತಿರುವ ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿಯವರು ಮೇ 23ರಂದು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು.

ಈ ವೇಳೆ ಮಂದಿರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಧನಸಹಾಯ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಸಂಚಾಲಕ ಸತ್ಯಶಾಂತಿ ತ್ಯಾಗಮೂರ್ತಿ, ಕಾರ್ಯದರ್ಶಿ ನಿರಂಜನ, ಕೋಶಾಧಿಕಾರಿ ಲೀಲಾವತಿ, ಉಪಾಧ್ಯಕ್ಷ ಹರಿಣಾಕ್ಷಿ ಹಾಗೂ ಮುಖಂಡರಾದ ಸುಪ್ರೀತ್ ಮೋoಟಡ್ಕ, ಪ್ರಮುಖರಾದ ರುಕ್ಕಯ್ಯ ಗೌಡ ಸುತ್ತುಕೋಟೆ ಉಪಸ್ಥಿತರಿದ್ದರು.

ಇದಲ್ಲದೆ ಮುಖಂಡರಾದ , ಸುಂದರ ರೈ, ಲೋಕೇಶ್, ಶುಭ ಕಾಡುತೋಟ, ವೀಣಾ ಕುಕ್ಕುಂದೂರು, ಪ್ರಿಯಾಂಕ ಚಂದ್ರಶೇಖರ, ಮೋಹಿನಿ ನಡುಮನೆ ಮೊದಲಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here