ಮಾಣಿಯಲ್ಲಿ ಭೀಕರ ರಸ್ತೆ ಅಪಘಾತ : ಮೀನಿನ ಲಾರಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರ ಮೃತ

0
12

ಪುತ್ತೂರು : ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲವು ವರ್ಷಗಳಿಂದ ಪುತ್ತೂರಿನ ಸಂಟ್ಯಾರು ಪ್ರದೇಶದಲ್ಲಿ ವಾಸವಾಗಿದ್ದರು.

ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here